ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ

ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ

ಬೆಂಗಳೂರು: ಇಂದು ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗುತ್ತಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಷ್ಟು ಹಣ ಬಿಡುಗಡೆಯಾಗುತ್ತಿದೆ ಎಂದು ಕುತುಹಲ ಮೂಡಿದೆ.

ಕರ್ನಾಟಕ ರಾಜ್ಯಕ್ಕೆ ಈ ಬಾರಿ ಹೆಚ್ಚಿನ ಅನುದಯ ಸಿಗುವ ನಿರೀಕ್ಷೆಯಲ್ಲಿರುವ ಜನತೆಗೆ, ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಳಿಯ ಮೇಲೆ ಎಲ್ಲರ ಚಿತ್ತ ಮೂಡಿದೆ.

ಹೌದು, ಇಂದು ಫೆಬ್ರವರಿ 01, ಕೇಂದ್ರ ಸರ್ಕಾರದ ಮಧ್ಯಾಂತರ ಬಜೆಟ್ ಮಂಡನೆ ಆಗುತ್ತಿರುವುದರಿಂದ ಕರ್ನಾಟಕ ರಾಜ್ಯಕ್ಕೆ ಯಾವೆಲ್ಲ ಯೋಜನೆಗೆ ಎಷ್ಟೆಲ್ಲ ಹಣ ಬಿಡುಗಡೆಯಾಗುತ್ತದೆ ಎಂದು ನಿರೀಕ್ಷೆಯನ್ನು ಮೂಡಿಸಿದೆ.

ಇನ್ನು ಬೆಂಗಳೂರಿನ ಸಬ್ ಅರ್ಬನ್ ರೈಲಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆ ಇದೆ. ರಾಯಚೂರಿಗೆ ಏಮ್ಸ್ ಆಸ್ಪತ್ರೆ ಮಂಜೂರು, ಇನ್ನು 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಕ್ಕೆ 5495 ಕೋಟಿ ವಿಶೇಷ ಅನುದಾನದ ನಿರೀಕ್ಷೆಗಳಿವೆ. ಭದ್ರ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡುವ ನಿರೀಕ್ಷೆಗಳಿವೆ. ಮೇಕೆದಾಟು, ಎತ್ತಿನಹೊಳೆ, ಮಹದಾಯಿ ಯೋಜನೆಗಳಿಗೆ ಹೆಚ್ಚಿನ ನೆರವು ನೀಡುವ ಸಾಧ್ಯತೆ ಇದೆ.

ಇನ್ನು ಹೊಸ ಹೆದ್ದಾರಿ ಯೋಜನೆಗಳ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರ ಇದೆ. ಇನ್ನ ಶಿರಡಿಘಾಟ್‌ನಲ್ಲಿ ಸುರಂಗ ಮಾರ್ಗದ ಬಗ್ಗೆಯೂ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

 

Related