ಚಾಮರಾಜನಗರ; ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು

ಚಾಮರಾಜನಗರ; ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆಲುವು

ಚಾಮರಾಜನಗರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಎಚ್‌ ಸಿ ಮಾದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

ಈಗಾಗಲೇ ಬಿಜೆಪಿ ಅಭ್ಯರ್ಥಿ ವಿರುದ್ಧ ಬಹುಮತಗಳಿಂದ ಗೆಲುವಿನತ್ತ ದಾಪುಗಾಲು ಇಟ್ಟಿರುವ ಸುನಿಲ್ ಬೋಸ್ ಅವರು ಇದೀಗ ಅಧಿಕೃತವಾಗಿ ಘೋಷಣೆ ಒಂದೇ ಬಾಕಿ ಇದ್ದು, ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಹೀನಾಯ ಸೋಲಾಗಿದೆ.

ಹೌದು, ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿಗೆ ವೇದಿಕೆಯಾಗಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವಿನ ನಗೆಬೇರಿದೆ. ಇದನ್ನೂ ಓದಿ: ಹಾಸನ; ಪ್ರಜ್ವಲ್ ರೇವಣ್ಣ ಹೀನಾಯ ಸೋಲು, ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

ಸಚಿವ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಎಸ್‌.ಬಾಲರಾಜು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್‌ ಬೋಸ್‌ 314724 ಮತ ಪಡೆದಿದ್ದು, ಎಸ್‌.ಬಾಲರಾಜು ಬಿಜೆಪಿ 250094 ಮತಗಳನ್ನು ಪಡೆದಿದ್ದಾರೆ.

Related