‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 4 ಕೋಟಿ

‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 4 ಕೋಟಿ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಗುರುವಾರ  ನೀಡಲಾಯಿತು.

ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ನಾಲ್ಕು ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದ ಕಚೇರಿಯಲ್ಲಿ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮೂಲಸೌಕರ್ಯ‌ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ, ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಜಿ.ಪೂಜಾರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Related