ಮೊಟ್ಟೆಯಿಂದ ಮಕ್ಕಳ ಹಾರ್ಮೋನ್ಸ್ ವ್ಯತ್ಯಯ..!

ಮೊಟ್ಟೆಯಿಂದ ಮಕ್ಕಳ ಹಾರ್ಮೋನ್ಸ್ ವ್ಯತ್ಯಯ..!

ರಾಷ್ಟ್ರೀಯ ಶಿಕ್ಷಣ ನೀತಿ 2020 ಹಾಗೂ ರಾಷ್ಟ್ರೀಯ ಪಠ್ಯ ಕ್ರಮ ಸಿದ್ಧತೆಗಳಿಗಾಗಿ ಕರ್ನಾಟಕದ DSERT ಸಲ್ಲಿಸಿರುವ ಮಕ್ಕಳ ಆರೋಗ್ಯ ಹಾಗೂ ಕ್ಷೇಮಗಳ ಬಗೆಗಿನ ತಜ್ಞರ ಸಲಹಾ ವರದಿಯಲ್ಲಿ, ‘ಶಾಲೆ ಮಕ್ಕಳ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾಲು, ಬಿಸ್ಕೆಟ್, ಹೆಚ್ಚು ಕೊಬ್ಬಿನ ಅಂಶವಿರುವ ಮೊಟ್ಟೆ ಮತ್ತಿತರ ಆಹಾರ ಸೇವನೆಯಿಂದ ಮಕ್ಕಳ ಹಾರ್ಮೋನ್ಸ್ವ್ಯತ್ಯಯವಾಗುತ್ತದೆ ಎಂಬುದು ಸುದ್ದ ಅವೈಜ್ಞಾನಿಕವಾಗಿದೆ ಅದನ್ನು ಕೂಡಲೇ ಸಂಪೂರ್ಣವಾಗಿ ಹಿಂಪಡೆಯಬೇಕು’ ಎಂದು ರಾಜ್ಯ ಸರ್ಕಾರಕ್ಕೆ ತಜ್ಞರು ಆಗ್ರಹಿಸಿದ್ದಾರೆ.

ಆಗ್ರಹ ಪತ್ರದಲ್ಲಿ, ರಾಷ್ಟ್ರೀಯ ಶಿಕ್ಷಣ ನೀತಿ 2020 ಹಾಗೂ ರಾಷ್ಟ್ರೀಯ ಪಠ್ಯ ಕ್ರಮ ಸಿದ್ಧತೆಗಳಿಗಾಗಿ ಕರ್ನಾಟಕದ ಡಿಎಸ್ಇಆರ್ಟಿ ಸಲ್ಲಿಸಿರುವ ಮಕ್ಕಳ ಆರೋಗ್ಯ ಹಾಗೂ ಕ್ಷೇಮಗಳ ಬಗೆಗಿನ ತಜ್ಞರ ಸಲಹಾ ವರದಿಯು ಹಳಸಾಗಿ, ಅವೈಜ್ಞಾನಿಕವಾಗಿ, ಅತಿರೇಕದ್ದಾಗಿ, ಬಾಲಿಶವಾಗಿದ್ದು ಅದನ್ನು ಕೂಡಲೇ ಸಂಪೂರ್ಣವಾಗಿ ಹಿಂಪಡೆಯಬೇಕಾಗಿದೆ.

ಇಂಥದ್ದೊಂದು ಕೀಳಾದ, ಬೇಜವಾಬ್ದಾರಿಯ ವರದಿಯಲ್ಲಿ ನರಮಾನಸಿಕ ವಿಜ್ಞಾನದಲ್ಲಿ ಅಂತರರಾಷ್ಟ್ರೀಯ ಮನ್ನಣೆಯನ್ನೂ, ಖ್ಯಾತಿಯನ್ನೂ ಪಡೆದಿರುವ, ನಮ್ಮ ದೇಶದ ಅತ್ಯುನ್ನತವಾದ, ಗೌರವಾರ್ಹವಾದ ನಿಮ್ಹಾನ್ಸ್ ಸಂಸ್ಥೆಯ ಮಕ್ಕಳ ಹಾಗೂ ಹದಿಹರೆಯದ ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ. ಜಾನ್ ವಿಜಯ್ ಸಾಗರ್ ಅವರ ಹೆಸರನ್ನು ತಜ್ಞರ ಸಮಿತಿಯ ಅಧ್ಯಕ್ಷನೆಂದು ನೀಡಿರುವುದನ್ನು ಕಂಡು ಆ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದ ನಮಗೆ ಅತೀವ ಆಘಾತವೂ, ಬೇಸರವೂ ಆಗಿದೆ. ಮಕ್ಕಳ ಆರೋಗ್ಯದ ಬಗೆಗಿನ ಈ ತಜ್ಞರ ಸಮಿತಿಯಲ್ಲಿ ಒಬ್ಬರೇ ಒಬ್ಬ ಮಕ್ಕಳ ತಜ್ಞ ಇಲ್ಲದಿರುವುದು ಕಳವಳಕಾರಿಯಾಗಿದೆ. ಎಂದು ತಜ್ಞರು ಆಗ್ರಹಿಸಿದರು.

Related