ಬಿಜೆಪಿ ಮುಖಂಡನ ಭೀಕರ ಹತ್ಯೆ..!

  • In Crime
  • July 27, 2022
  • 227 Views
ಬಿಜೆಪಿ ಮುಖಂಡನ ಭೀಕರ ಹತ್ಯೆ..!

ಮಂಗಳೂರು, ಜು 27 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬಿಜೆಪಿಯ ಯುವ ಮುಖಂಡನನ್ನು ಕೊಲೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಕೇರಳದ ಮೂವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ರಾತ್ರಿ 8: 30 ಕ್ಕೆ ಸುಮಾರಿಗೆ ಕೊಲೆಯಾಗಿದ್ದಾರೆ. ತನ್ನ ಕೋಳಿ ಅಂಗಡಿಯನ್ನು ಮುಚ್ಚಿ ಹಿಂದಿರುಗುತ್ತಿದ್ದಾಗ ದಾಳಿಕೋರರು ಆತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಕೊಲೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತೀವ್ರ ತನಿಕೆಯನ್ನು ಮಾಡಲಾಗಿದೆ.

“ಕಳೆದ ವಾರ ಕೇಸರಿ ಪಡೆಯಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಈ ಕೊಲೆ ಮಾಡಲಾಗಿದೆ” ಎಂದು ಮೂಲಗಳು ಹೇಳಿವೆ.

ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆಯಾಗಿತ್ತು‌. ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್ (18) ಮೇಲೆ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂಬವರು ಹಲ್ಲೆ ನಡೆಸಿದ್ದರು. ‌

Related