ನೃತ್ಯ ಕಲಾವಿದೆ ಶೋಭ ನಾಯ್ಡು ನಿಧನ

ನೃತ್ಯ ಕಲಾವಿದೆ ಶೋಭ ನಾಯ್ಡು ನಿಧನ

ಹೈದ್ರಾಬಾದ್ : ಖ್ಯಾತ ಕೂಚುಪುಡಿ ನೃತ್ಯ ಕಲಾವಿದೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶೋಭಾ ನಾಯ್ಡು ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 1956 ರಲ್ಲಿ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಜನಿಸಿದ್ದ ಶೋಭಾ ನಾಯ್ಡು ಕೂಚುಪುಡಿ ನೃತ್ಯದ ತರಬೇತಿಯನ್ನು ವೇಂಪತಿ ಚಿನ್ನ ಸತ್ಯಂ ಅವರಿಂದ ಪಡೆದರು.

ಶೋಭಾ ಅವರಿಗೆ 1991 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2001 ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವ ಮದ್ರಾಸ್‌ನ ಶ್ರೀ ಕೃಷ್ಣ ಗಣ ಸಭೆಯಿಂದ ನೃತ್ಯ ಚೂಡಾಮಣಿ ಪ್ರಶಸ್ತಿ ಸಂದಿದೆ.

ಹೈದರಾಬಾದ್‌ನ 40 ವರ್ಷಪರಂಪರೆ ಇರುವ ಕೂಚುಪುಡಿ ಆರ್ಟ್ ಅಕಾಡೆಮಿಗೆ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಭಾರತ ಮತ್ತು ವಿದೇಶಗಳ 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ದೇಶಾದ್ಯಂತ ಮತ್ತು ವಿದೇಶಗಳಲ್ಲಿ ತಮ್ಮ ತಂಡದೊಂದಿಗೆ ಪ್ರದರ್ಶನ ನೀಡಿದ್ದ ಶೋಭಾ ನಾಯ್ಡು ಸತ್ಯಭಾಮ ಮತ್ತು ಪದ್ಮಾವತಿ ಪಾತ್ರಗಳಲ್ಲಿ ಉತ್ತಮ ಅಭಿನಯ ನೀಡಿದ್ದರು. ಅತ್ಯುತ್ತಮ ಏಕವ್ಯಕ್ತಿ ನರ್ತಕಿ ಕೂಡ ಆಗಿದ್ದ ಶೋಭಾ ನಾಯ್ಡು ಹಲವಾರು ನೃತ್ಯ-ನಾಟಕಗಳನ್ನು, ನೃತ್ಯ ಸಂಯೋಜನೆ ಮಾಡಿದ್ದಾರೆ.

Related