ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಬೊಮ್ಮನಹಳ್ಳಿ :ಇಂದು ಹೊಂಗಸಂದ್ರದ ಕ್ಲಸ್ಟರ್ ಮಟ್ಟದಲ್ಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಹೊಂಗಸಂದ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಪ್ರತಿಭೆಯ ಮಹತ್ವವದ ಕುರಿತು ತಿಳಿಸಲಾಯಿತು.

ಈ ಸಂದರ್ಭದಲ್ಲಿ  ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಭಾರತಿ ರಾಮಚಂದ್ರ, ಮಾಜಿ‌‌ ನಗರಸಭಾ ಸದಸ್ಯರಾದ ಶ್ರೀ ಟಿ.ರಾಮಚಂದ್ರ, ಸ್ಥಳೀಯ ಮುಖಂಡರು, ಶಾಲೆಯ ಆಡಳಿತ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related