4 ಶಾಲಾ ವಿದ್ಯಾರ್ಥಿಗಳ ಸಾವು ಪರಿಹಾರ ಘೋಷಿಸಿದ ಸಿಎಂ

4 ಶಾಲಾ ವಿದ್ಯಾರ್ಥಿಗಳ ಸಾವು ಪರಿಹಾರ ಘೋಷಿಸಿದ ಸಿಎಂ

ಬಾಗಲಕೋಟೆ: ಶಾಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೆ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಈ ಸಂದರ್ಭದಲ್ಲಿ ಸ್ಥಳದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪದಲ್ಲಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿತ್ತು.

ಇನ್ನು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಃಖ ವ್ಯಕ್ತಪಡಿಸಿದ್ದಾ.ರೆ ಅಲ್ಲದೆ ಮೃತ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸಿದ್ದಾರೆ.

“ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಪೋಸ್ಟ್ ಮಾಡಲಾಗಿದೆ.

Related