ಮಾರ್ಚ್ 5ಕ್ಕೆ ಸಿಎಂ ಬಜೆಟ್

ಮಾರ್ಚ್ 5ಕ್ಕೆ ಸಿಎಂ ಬಜೆಟ್

ದಾವಣಗೆರೆ, ಫೆ. 10 : ಮಾ.5 ರಂದು ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆಂದು ಸಿಎಂ ಬಿಎಸ್ ವೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜ, ಇಲಾಖೆಗಳೊಂದಿಗೂ ಈಗಾಗಲೇ ಬಜೆಟ್ ಕುರಿತು ಮಾತುಕತೆ ನಡೆಸಲಾಗಿದ್ದು, ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮಾ.5 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಕೆಲಸಕ್ಕೆ ಬಾರದ ಸರ್ಕಾರ ಎಂಬ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾರ್ಜಜನಿಕರಿಂದ ಚಪ್ಪಾಳೆಗಿಟ್ಟಿಸಿಕೊಳ್ಳಲು, ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

Related