ಇಂದು ಕಾಂಗ್ರೆಸ್‌ ಶಾಸಕಾಂಗ ಸಭೆ ಕರೆದ ಸಿಎಂ!

ಇಂದು ಕಾಂಗ್ರೆಸ್‌ ಶಾಸಕಾಂಗ ಸಭೆ ಕರೆದ ಸಿಎಂ!

ಬೆಂಗಳೂರು:  ಕಾಂಗ್ರೆಸ್ ಪಕ್ಷದಲ್ಲಿ ಹಲವು ಶಾಸಕ ಮತ್ತು ಸಚಿವರ ನಡುವೆ ಬೇಸರ ಸಂಗತಿಗಳು ನಡೆದಿದ್ದು ಇದನ್ನು ಸರಿಪಡಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಚಿವರ ವಿರುದ್ಧ ಕೆಲವು ಶಾಸಕರ ಅಸಮಾಧಾನ ಸ್ಫೋಟ ಹಿನ್ನೆಲೆಯಲ್ಲಿ ಇವತ್ತಿನ ಸಭೆಯು ತುಂಬಾನೇ ಮಹತ್ವ ಪಡೆದುಕೊಂಡಿದೆ.

ನಗರದ ಖಾಸಗಿ ಹೋಟೆ‌ಲ್‌ನಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ, ಸಿಎಂ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ತುರ್ತು ಸಿಎಲ್‌ಪಿ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪರಿಷತ್ ಸಭಾ ನಾಯಕ ಎನ್.ಎಸ್‌.ಬೋಸರಾಜು ಹಾಗೂ ಸಚಿವರು ಸೇರಿದಂತೆ ಕಾಂಗ್ರೆಸ್‌ನ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.

 

Related