ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಕಾಂಗ್ರೆಸ್ ಪಕ್ಷದ ಶಾಸಕರೇ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂಬಂತೆ ಕಾಣುತ್ತಿದೆ.
ಹೌದು, ಕಾಂಗ್ರೆಸ್ ಪಕ್ಷದ ಶಾಸಕ . ಬಿ.ಆರ್ ಪಾಟೀಲ್ ಅವರು ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಬೇಕಾದರೆ ಲಂಚ ನೀಡಿದವರಿಗೆ ಮಾತ್ರ ಮನೆ ಮಂಜೂರಾಗುತ್ತೆ ಎಂಬ ಆಡಿಯೋ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ: ಇಂದು ಹೈಕೋರ್ಟ್ ಅರ್ಜಿ ವಿಚಾರಣೆ!
ಇನ್ನು ಆಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಬಿ ಆರ್ ಪಾಟೀಲ್ ಅವರನ್ನು ಬುಲಾವ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷಕ್ಕೆ ಮುಜುಗರವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಿ.ಆರ್.ಪಾಟೀಲ್ಗೆ ಖುದ್ದು ಫೋನ್ ಮಾಡಿ ಭೇಟಿಯಾಗುವಂತೆ ಸೂಚಿಸಿದ್ದಾರೆ. ಬೆಂಗಳೂರಿಗೆ ಬಂದು ಕಾವೇರಿ ನಿವಾಸಲ್ಲೇ ಭೇಟಿ ಮಾಡುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾಗಿ ಮೂಲಗಳು ತಿಳಿಸಿವೆ.
