ಚಾಮುಂಡಿ ತಾಯಿ ದರ್ಶನ ಪಡೆದ ಸಿಎಂ, ಡಿಸಿಎಂ

ಚಾಮುಂಡಿ ತಾಯಿ ದರ್ಶನ ಪಡೆದ ಸಿಎಂ, ಡಿಸಿಎಂ

ಮೈಸೂರು: 2023 ನೇ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ತಾಯಿ ಚಾಮುಂಡೇಶ್ವರಿ ಗೆ ಹರಕೆಯನ್ನು ಹೊತ್ತಿದ್ದರು.

ಆ ಹರಕೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೇರಿಕೊಂಡು ಇಂದು ಬೆಳಗ್ಗೆ ನಾಡ ದೇವತೆ ಚಾಮುಂಡಿ ತಾಯಿಗೆ ಹರಕೆಯನ್ನು ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಇನ್ನು ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

 

Related