ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ

ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಅವರನ್ನು ಬೆಂಗಳೂರು ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಬಸವರಾಜ್ ಬೊಮ್ಮಾಯಿ ಅವರ ಮೊಣಕಾಲು ನೋವು ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವುದನ್ನು ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿ, ಬೊಮ್ಮಾಯಿ ಅವರು ಬೇಗ ಗುಣಮುಖರಾಗಿ ಬರಲೆಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

Related