ಸಿಎಂ ಭೇಟಿ ಮಾಡಿ ಶಿವರಾಜ್​ಕುಮಾರ್​ ಕುಟುಂಬ

ಸಿಎಂ ಭೇಟಿ ಮಾಡಿ ಶಿವರಾಜ್​ಕುಮಾರ್​ ಕುಟುಂಬ

ಬೆಂಗಳೂರು: ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದ ಭೇಟಿಯಾಗಿ ಅಭಿನಂದಿಸಿದರು. ಸಚಿವ ಮಧು ಬಂಗಾರಪ್ಪ ಅವರು ಜತೆಗಿದ್ದರು.

ಹೌದು, ಇಂದು ಶಿವರಾಜ್​ಕುಮಾರ್​ ಮತ್ತು ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ನೂತನ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹೂಗುಚ್ಛ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ಶಿವರಾಜ್​ಕುಮಾರ್​ ಅವರ ಸಂಬಂಧಿ ಮಧು ಬಂಗಾರಪ್ಪ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರಿಗೆ ರಾಜಕೀಯ ಮುಖಂಡರ ಜೊತೆಗೆ ನಂಟು ಇದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳ ಪರವಾಗಿ ಶಿವರಾಜ್​​ಕುಮಾರ್​ ಮತ್ತು ಗೀತಾ ಶಿವರಾಜ್​ಕುಮಾರ್​ ಪ್ರಚಾರ ಮಾಡಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಗೀತಾ ಶಿವರಾಜ್​ಕುಮಾರ್​ ಅವರು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆ ಆಗಿದ್ದರು. ಅವರು ಪ್ರಚಾರ ಮಾಡಿದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಜಯಭೇರಿ ಬಾರಿಸಿದರು.

Related