ಮಹಾತ್ಮ ಗಾಂಧೀಜಿಯವರಿಗೆ ಸಿಎಂ ಗೌರವ ನಮನ

ಮಹಾತ್ಮ ಗಾಂಧೀಜಿಯವರಿಗೆ ಸಿಎಂ ಗೌರವ ನಮನ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಅಂಗವಾಗಿ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳ ಮಧ್ಯ ಭಾಗದಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದ ಬಳಿಕ, ಕೆಲವು ನಿಮಿಷಗಳ ಕಾಲ ಮೌನವನ್ನು ಆಚರಣೆ ಮಾಡಿ, ಹುತಾತ್ಮರ ದಿನಾಚರಣೆಯನ್ನು ನೆರವೇರಿಸಿದರು.

ಈ ವೇಳೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಡಾ. ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಸುರೇಶ (ಬೈರತಿ), ಮುಖ್ಯಮಂತ್ರಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಶರವಣ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್,  ಮಾಜಿ ಸಚಿವ ಹೆಚ್.ಆಂಜನೇಯ, ರಾಜ್ಯ ಸಭೆ ಸದಸ್ಯ ರಾಜೀವ್ ಗೌಡ, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Related