ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭಿನ್ನಮತ ಕಾಣುತ್ತಿರುವುದು ಎದ್ದು ಕಾಣುತ್ತಿದೆ ಅದಕ್ಕೆ ಉದಾಹರಣೆ ಎಂಬಂತೆ ಸಚಿವ ಹೆಚ್ ಕೆ ಪಾಟೀಲ್ ಮಾಡಿರುವ ಆರೋಪ ಮತ್ತು ಬಿ ಆರ್ ಪಾಟೀಲ್ ಅವರು ಮಾಡಿರುವ ಆರೋಪಗಳೇ ಇದಕ್ಕೆ ದೊಡ್ಡ ಉದಾಹರಣೆ ಎಂಬಂತಾಗಿದೆ.
ಇನ್ನು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ 60% ಕಮಿಷನ್ ಇಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಂಗ್ರೆಸ್ ಪಕ್ಷದ ಮೇಲೆ ನೇರ ಆರೋಪ ಮಾಡಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಕೇವಲ ನಿದ್ರೆಯಲ್ಲಿ ಜಾರಿದ್ದಾರೆ ಹೊರತಾಗಿ ರಾಜ್ಯದ ಜನತೆಯ ಕಷ್ಟವನ್ನು ನೀಗಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಈಗ ಸ್ಲೀಪಿಂಗ್ ಸಿದ್ದರಾಮಯ್ಯ ಆಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಯಾವುದೇ ಅಭಿವೃದ್ಧಿ ಕಡೆ ಗಮನ ಕೊಡದೆ ಕೇಂದ್ರ ಸರ್ಕಾರದ ಮೇಲೆ ಇಲ್ಲದ ಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗಣಿ ಇಲಾಖೆಯಲ್ಲಿ ಲೂಟಿ ಮಾಡುತ್ತಿದ್ದಾರೆ. ಗಣಿ ಇಲಾಖೆಯಲ್ಲೂ ಹಣ ವಸೂಲಿಗೆ ಇಳಿದಿದ್ದಾರೆ. ಇದನ್ನೂ ಓದಿ: ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ: ಲಕ್ಷ್ಮೀ ಹೆಬ್ಬಾಳಕರ್
ರಾಜ್ಯದಲ್ಲಿರುವ ಕಾಂಗ್ರೆಸ್ ಶಾಸಕರು ಏನಾದರೂ ಬಾಯಿ ಬಿಟ್ಟರೆ ಈ ಸರ್ಕಾರ ಮೂರು ದಿನವೂ ಉಳಿಯಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ದೊಡ್ಡ ತಿಮಿಂಗಲುಗಳೆ ಸೇರಿದ್ದಾವೆ ಆದ್ದರಿಂದ ಕರ್ನಾಟಕ ಉದ್ದಾರವಾಗುತ್ತಿಲ್ಲ ಎಂದಿದ್ದಾರೆ. 224 ಕ್ಷೇತ್ರಗಳಲ್ಲೂ ಭ್ರಷ್ಟಾಚಾರವಾಗುತ್ತಿದೆ. ರಾಜ್ಯದಲ್ಲಿರುವ ಬಡವರ ಹತ್ತಿರ ವಸೂಲಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಬಡವರನ್ನು ಲೂಟಿ ಮಾಡುತ್ತಿರುವ ಸರ್ಕಾರ ಮೊದಲು ತೊಲಗಲಿ ಎಂದಿದ್ದಾರೆ.
