ಜಿಲ್ಲಾಧಿಕಾರಿ ಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್

ಜಿಲ್ಲಾಧಿಕಾರಿ ಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ, ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೋವಿಡ್ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಿದರು.

ಈ ವೇಳೆ ಸಚಿವರಾದ ಅರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಆರ್.ಅಶೋಕ್, ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಹಿರಿಯ ಅಧಿಕಾರಿಗಳು, ಉಪಸ್ಥಿತರಿದ್ದರು.

Related