ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ

ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು: ಮುಂಗಾರು ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ನಿವಾರಣೆ ಕ್ರಮಗಳ ಬಗ್ಗೆ ಪರಾಮರ್ಶೆ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳ ಜತೆ ವಿಡಿಯೋ ಸಂವಾದ ಸಭೆಯನ್ನು ನಡಸಿದರು.

ವಿಡಿಯೋ ಸಂವಾದದವಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.  ಇದನ್ನೂ ಓದಿ: ಸಿಎಂ, ಡಿಸಿಎಂ ಔತಣಕೂಟ; ಔತನಕೂಟದಲ್ಲಿ ಚರ್ಚೆಯಾಗಿದ್ದೇನೆ?

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ.

ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು..

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

 

Related