ಮೈಸೂರು ಮಹಾರಾಣಿ ಕಾಲೇಜಿಗೆ ಭೇಟಿ ನೀಡಿದ ಸಿಎಂ

ಮೈಸೂರು ಮಹಾರಾಣಿ ಕಾಲೇಜಿಗೆ ಭೇಟಿ ನೀಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿ ವಿದ್ಯಾರ್ಥಿನಿಯರ ಜತೆ ಸಂವಾದ ನಡೆಸಿದರು.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.

ನೂತನ ಕಟ್ಟಡಗಳ ನೀಲನಕ್ಷೆಯನ್ನು ಗಮನಿಸಿದ ಮುಖ್ಯಮಂತ್ರಿಗಳು ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವುದೂ ಸೇರಿದಂತೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.

 

Related