ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ ಆ. 06) ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಮಾತನಾಡಿಸಿ ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಸಿಬ್ಬಂದಿಗಳ ಹತ್ತಿರ ಕೇಳಿ ತಿಳಿದುಕೊಂಡಿದ್ದಾರೆ.
ಇನ್ನು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಮಾತನಾಡಿಸಿ, ಎಷ್ಟು ದಿನದಿಂದ ನೀವು ಚಿಕಿತ್ಸೆ ಪಡೆಯುತ್ತಿದ್ದೀರಾ? ಹಾಗೂ ನಿಮಗೆ ಇಲ್ಲಿ ಊಟ ಎಲ್ಲಾ ಸರಿಯಾಗಿ ಸಿಗುತ್ತದೆ ಎಂದು ಕೇಳಿದ್ದಾರೆ. ಅಲ್ಲದೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡುವ ಊಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇವಿಸಿದ್ದಾರೆ. ಇದನ್ನೂ ಓದಿ: ಕಾಲಮಿತಿಯಲ್ಲಿ ಎಸ್ ಟಿ ಪಿ ಕಾಮಗಾರಿ ಪೂರ್ಣಗೊಳಿಸಿ
ಪರಿಶೀಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಕ್ಟೋರಿಯಾ, ವಾಣಿವಿಲಾಸ ಆಸ್ಪತ್ರೆ ಪರಿಶೀಲನೆ ನಡೆಸಿದ್ದೇನೆ. ಎರಡೂ ಆಸ್ಪತ್ರೆಯಲ್ಲಿ ರೋಗಿಗಳ ಸಮಸ್ಯೆ ಬಗ್ಗೆ ಕೇಳಿದ್ದೇನೆ. ಊಟ, ಚಿಕಿತ್ಸೆ, ವೈದ್ಯಕೀಯ ಸೇವೆ ಹೇಗಿದೆ ಎಂದು ಕೇಳಿದ್ದೇನೆ. ಎಲ್ಲವೂ ಚೆನ್ನಾಗಿದೆ ಎಂದು ರೋಗಿಗಳು ಹೇಳಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವೈದ್ಯಕೀಯ ಸಚಿವರಾಗಿರುವಂತ ಶರಣಪ್ರಕಾಶ್ ಪಾಟೀಲ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
