ಶೀತ, ನೆಗಡಿ,ಜ್ವರ ಬಂದರೆ ವೈದ್ಯರನ್ನು ಸಂಪರ್ಕಿಸಿ

ಶೀತ, ನೆಗಡಿ,ಜ್ವರ ಬಂದರೆ ವೈದ್ಯರನ್ನು ಸಂಪರ್ಕಿಸಿ

ಬೆಂಗಳೂರು, ಏ. 18 : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಶೀತ, ನೆಗಡಿ ಹಾಗೂ ಜ್ವರ ಬಂದಿದ್ದೇ ಆದರೆ, ಕೂಡಲೇ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ವೈರಸ್ ಕುರಿತಂತೆ ಎದುರಾಗಿರುವ ಪರಿಸ್ಥಿತಿ ಕುರಿತಂತೆ ಹಿರಿಯ ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ವರ, ನೆಗಡಿ, ಕೆಮ್ಮು ಅಥವಾ ಉಸಿರಾಟ ಸಮಸ್ಯೆ ಕಂಡು ಬಂದ ಕೂಡಲೇ ಜನರು ವೈದ್ಯರನ್ನು ಸಂಪರ್ಕಿ, ಗುಣಮುಖರಾಗಲು ಚಿಕಿತ್ಸೆ ಪಡೆದುಕೊಳ್ಳಬೇಕು. ಆದರೆ, ಲಕ್ಷಣಗಳು ಕಂಡು ಬಂದ ನಾಲ್ಕು ದಿನಗಳ ಬಳಿಕ ಸಾಕಷ್ಟು ಜನರು ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 44 ಹೊಸ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಸಭೆಯಲ್ಲಿ ವೈದ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಪತ್ತೆಯಾಗಿರುವ ಸೋಂಕಿತರಿಗೆ ಚಿಕಿತ್ಸೆ ನೀಡಲು ಶಿಷ್ಟಾಚಾರ ರೂಪಿಸುವಂತೆ ತಿಳಿಸುತ್ತಿದ್ದಾರೆ. ಐಸಿಯುನಲ್ಲಿರುವ ಸೋಂಕಿತರ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಹಾಗೂ ಹೆಚ್ಚುವರಿ ಪರೀಕ್ಷೆಗಳನ್ನು ನಡೆಸುವಂತೆ ಸಲಹೆ ನೀಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ದಿನಕ್ಕೆ 500ರಿಂದ 2000ರವರೆಗೂ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

Related