ಬೆಂಗಳೂರು: ಕರ್ನಾಟಕದ ವಿಧಾನಪರಿಷತ್ತಿನ ಸದಸ್ಯರಾದ ಬಿಜೆಪಿಯ ರವಿಕುಮಾರ್ ರವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ರವರ ವಿರುದ್ಧ ಅವಹೇಳನಕಾರಿ ಮತ್ತು ಮಾನಹಾನಿ ಹೇಳಿಕೆಯನ್ನು ನೀಡಿದ್ದು, ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ್ ಹೊರಟ್ಟಿರವರಿಗೆ ನಿನ್ನೆ (ಗುರುವಾರ ಜುಲೈ03) ಸಂಜೆ 5 ಗಂಟೆಗೆ ವಿಧಾನಸೌಧದ ಮೊದಲನೇ ಮಹಡಿಯ ಅವರ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹಮದ್ ರವರ ನಾಯಕತ್ವದಲ್ಲಿ ದೂರನ್ನು ಸಲ್ಲಿಸಿದರು. ಇದನ್ನೂ ಓದಿ: ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ
