ಕಾಂಗ್ರೆಸ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು

ಕಾಂಗ್ರೆಸ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆದಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18ರಿಂದ 20 ಕ್ಷೇತ್ರ ಗೆಲ್ಲುವ ಭರವಸೆಯನ್ನು ಹೊಂದಿದ್ದು, ಬಿಜೆಪಿ ಪಕ್ಷ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆಯನ್ನು ಹೊಂದಿದೆ.

ಇನ್ನು ಕಾಂಗ್ರೆಸ್ ಪಕ್ಷವು ಮತದಾರರನ್ನು ಸೆಳೆಯಲು ಖಾತರಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಜೆಡಿಎಸ್ ನ ಸದಸ್ಯ ಟಿ ಎಸ್ ಶರವಣ ಅವರು ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದಾರೆ.

ಲೋಕಸಭಾ ಚುನಾವಣೆ-2024 ರಲ್ಲಿ ಚುನಾವಣಾ ಲಂಚ ಮತ್ತು ಮತದಾರರನ್ನು ಪ್ರೇರೇಪಿಸುವ ಉದ್ದೇಶದಿಂದ ಖಾತರಿ ಕಾರ್ಡ್‌ಗಳನ್ನು ಪ್ರಸಾರ ಮಾಡುವುದು ಮತ್ತು ವಿತರಿಸುವ ಕಾಂಗ್ರೆಸ್ ಪಕ್ಷವನ್ನು ನಿರ್ಬಂಧಿಸ ಬೇಕೆಂದು ವಿನಂತಿಸಲಾಗಿದ್ದು, ಕಾಂಗ್ರೆಸ್ ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ಗುಂಪುಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಇದು ಆಮಿಷಗಳು ಮತ್ತು ಪ್ರಚೋದನೆಗಳಿಗೆ ಕಾರಣವಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related