ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಸೂಚನೆ

ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಸೂಚನೆ

ಗದಗ : ಗದಗ-ಬೆಟಗೇರಿ ನಗರಸಭೆ ಸಭಾಂಗಣದಲ್ಲಿ ವ್ಯಾಪ್ತಿಯಲ್ಲಿ ಕೈಗೊಂಡ ನೀರು ಸರಬರಾಜು ಹಾಗೂ ಒಳಚರಂಡಿ ಸೇರಿದಂತೆ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಸಂಸದ ಶಿವಕುಮಾರ್ ಉದಾಸಿ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೃತ್ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ನಗರದಲ್ಲಿ ಪ್ರತಿ ಮನೆಗೂ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸಬೇಕು. ಇನ್ನುಳಿದ 25 ಕಿ.ಮೀ. ಪೈಪ್‌ಲೈನ್ ಕಾಮಗಾರಿಯನ್ನು ವಿಳಂಬ ಮಾಡಬಾರದು ಎಂದು ಸೂಚಿಸಿದರು.

ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಮಾತನಾಡಿ, ಹಮ್ಮಿಗಿ ಬ್ಯಾರೆಜ್‌ನಿಂದ ಡಂಬಳವರೆಗೆ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಸುಮಾರು 65 ಕಿ.ಮೀ.ವರೆಗೆ ಪೈಪ್‌ಲೈನ್ ಅಳವಡಿಸಲಾಗಿದೆ. ನಗರದ ಒಳಚರಂಡಿ ಯೋಜನೆಯ ಮೊದಲ ಹಂತದ ಸುಮಾರು 15 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಅಮೃತ್ ಯೋಜನೆಯಡಿ ಎರಡನೇ ಹಂತದ ಒಳಚರಂಡಿ

ಯೋಜನೆಯ ದುರಸ್ತಿ ಹಾಗೂ ನಿರ್ವಹಣೆಗಾಗಿ 158 ಕೋಟಿ ರೂ. ಮೀಸಲಿಡಲಾಗಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಅಮೃತ್ ಯೋಜನೆಯ ಹೆಚ್ಚುವರಿ ಅನುದಾನದಡಿ ಹಾಲಿ ಸೀವರ್ ನೆಟ್ ವರ್ಕ್ ಪುನರುಜ್ಜೀವನಗೊಳಿಸಲು 2 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದರು.

Related