ಶಾಲೆಗಳ ಪುನರಾರಂಭಕ್ಕೆ ಗೊಂದಲ

ಶಾಲೆಗಳ ಪುನರಾರಂಭಕ್ಕೆ ಗೊಂದಲ

ಬೆಂಗಳೂರು :  ಶಾಲೆಗಳ ಪುನರಾರಂಭ ಕುರಿತು ಸರ್ಕಾರವೇ ಗೊಂದಲದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಕ್ಕಳು ಮತ್ತು ಶಾಲೆ ವಿಚಾರದಲ್ಲಿ ಪ್ರತಿ ನಿಮಿಷವೂ ಗೊಂದಲದಲ್ಲಿದೆ. ನಮ್ಮ ಶಿಕ್ಷಣ ಸಚಿವರು ಸಿಎಂ, ಶಾಲೆ ಆಡಳಿತ ಮಂಡಳಿ, ಪೋಷಕರ ಜತೆ ಮಾತನಾಡುವುದಾಗಿ ಹೇಳುತ್ತಾರೆ. ಸರ್ಕಾರ ಮೊದಲು ಗೊಂದಲ ನಿವಾರಣೆ ಮಾಡಬೇಕು. ಇಷ್ಟು ದಿನ ಸಂಸ್ಥೆಗಳು ನಡೆಯುತ್ತಿರಲಿಲ್ಲ. ಶಿಕ್ಷಕರಿಗೂ ಸಂಬಳ ನೀಡಬೇಕು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಶಾಲೆ ತೆರೆಯಬೇಕೋ ಬೇಡವೋ ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ಮಾಡಬೇಕು ಎಂದು ಹೇಳಿದರು.

Related