ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ ..

ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ ..

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಇಂದು ಆಯೋಜಿಸಿದ್ದ ಬೃಹತ್ ಪಾದಯಾತ್ರೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್ ಸಾರಥ್ಯದಲ್ಲಿ ಹಮ್ಮಿಕೊಂಡಿದ್ದ ಈ ಪಾದಯಾತ್ರೆಯಲ್ಲಿ ಪಕ್ಷದ ನಾಯಕರಾದ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ವಿ.ಮುನಿಯಪ್ಪ, ಶಿವಶಂಕರ ರೆಡ್ಡಿ, ಶ್ರೀನಿವಾಸಗೌಡ, ಶಾಸಕರಾದ ನಜೀರ್ ಅಹಮದ್, ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಮಾಜಿ ಸಭಾಪತಿ ಸುದರ್ಶನ್ ಮತ್ತಿತರರು ಪಾಲ್ಗೊಂಡಿದ್ದರು.

Related