ಕರ್ನಾಟಕ ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್ ಸರ್ಕಾರ ಭದ್ರವಾಗಿರುತ್ತದೆ: ಡಿಸಿಎಂ

ಕರ್ನಾಟಕ ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್ ಸರ್ಕಾರ ಭದ್ರವಾಗಿರುತ್ತದೆ: ಡಿಸಿಎಂ

ಹಾಸನ: ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿರುವುದು ಯಾಕೆಂದರೆ, ಬಡವರು ತಮ್ಮ ಬದುಕನ್ನು ಕಟ್ಟಿಕೊಳ್ಳಲೆಂದು ನಾವು ಈ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಜಾರಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತಿ ವಸ್ತುವಿನ ಬೆಲೆ ಹೆಚ್ಚಾಗುತ್ತಿರುವುದರಿಂದ ಮಹಿಳೆಯರು ತಮ್ಮ ಕುಟುಂಬ ಸಾಗಿಸಲು ಕಷ್ಟಪಡುತ್ತಾರೆ. ಆ ಕಷ್ಟಕ್ಕೆ ಸ್ಪಂದಿಸುವ ಸರ್ಕಾರ ನಮ್ಮದಾಗಿದ್ದು ಬಡವರ ಒಳತಿಗಾಗಿ ನಾವು ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅವರ ಪರವಾಗಿ ಅರಕಲಗೂಡಿನಲ್ಲಿ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರ ಹೇಳಿಕೆಗೆ ಡಿಕೆ ಶಿವಕುಮಾರ್ ಅವರು ಹಿಗ್ಗಾಮುಗ್ಗ ಜಾಡಿಸಿದ್ದಾರೆ.

ಜನತೆಗೋಸ್ಕರ 5 ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಅದನ್ನು ಈ ಲೋಕಸಭಾ ಚುನಾವಣೆ ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳು ಸುದ್ದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದರು. ಇನ್ನು ಇದಕ್ಕೆ ಪ್ರತಿಕ್ರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಯಡಿಯೂರಪ್ಪ, ವಿಜೇಂದ್ರ ಅಶೋಕ ಅವರೇ ನಿಮ್ಮ ಕನಸಿನಲ್ಲೂ ಕೂಡ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲವೆಂದು ಟಾಂಗ್ ನೀಡಿದ್ದಾರೆ.

ನಮ್ಮ ಸರ್ಕಾರ ಕೇವಲ ಐದು ವರ್ಷದ ಸರ್ಕಾರವಲ್ಲ. ಇನ್ನೂ 9 ವರ್ಷ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಭದ್ರವಾಗಿರುತ್ತದೆ ಎಂದು ಕೂಗಿ ಕೂಗಿ ಹೇಳಿದ್ದಾರೆ.  ಆದ್ದರಿಂದ ನಾಡಿನ ಜನತೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂಬ ಸುಳ್ಳು ಸುದ್ದಿಗೆ ಕಿವಿ ಕೊಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

 

 

 

Related