ಕಾಂಗ್ರೆಸ್ ಸರ್ಕಾರ ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ: ಎಚ್ ಡಿಕೆ

ಕಾಂಗ್ರೆಸ್ ಸರ್ಕಾರ ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ: ಎಚ್ ಡಿಕೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಮಗೆ ಇಷ್ಟ ಬಂದಂತೆ ಆಲ್ಕೋಹಾಲ್, ಹಾಲು ಮತ್ತು ತರಕಾರಿಗಳ ಬೆಲೆಯನ್ನು ಹೆಚ್ಚಿಸುತ್ತಿರುವುದರಿಂದ ಮಧ್ಯಮ ವರ್ಗದವರು, ಬಡ ಜನರು ಹೇಗೆ ಬದುಕಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತದೆ ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸರಣಿ ಟ್ವೀಟ್ ಮೂಲಕ ಅವರ ಆಕ್ರೋಶವನ್ನು ಹೊರಹಾಕಿದ್ದಾ.

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3ರೂ ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ ಎಂದು ಸರಣಿ ಟ್ವಿಟ್ ಮೂಲಕ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ನಂದಿನಿ ಹಾಲಿನ ದರ ಏರಿಸಬೇಕೆಂಬ ಕರ್ನಾಟಕ ಹಾಲು ಮಹಾ ಮಂಡಳಿಗಳ ಒಕ್ಕೂಟದ ಬಹು ದಿನಗಳ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಆಗಸ್ಟ್ 01ರಿಂದ ಪ್ರತಿ ಲೀಟರ್ ಗೆ ಮೂರು ರೂ. ದರ ಹೆಚ್ಚಳ ಮಾಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಈ 3 ರೂ. ಹಾಲು ಉತ್ಪಾದಕರಿಗೆ ವರ್ಗಾವಣೆಯಾಗಲಿದೆ.

ಕಾಂಗ್ರೆಸ್ ಸರ್ಕಾರ ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು ಈಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

 

Related