ರಾಜ್ಯದ ಜನತೆಗೆ ಕಾಂಗ್ರೆಸ್‌ನಿಂದ ಖಾಲಿ ಚಿಪ್ಪು: ಸುಧಾಕರ್‌

ರಾಜ್ಯದ ಜನತೆಗೆ ಕಾಂಗ್ರೆಸ್‌ನಿಂದ ಖಾಲಿ ಚಿಪ್ಪು: ಸುಧಾಕರ್‌

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 11 ತಿಂಗಳಾದರೂ ಕೂಡಾ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ, ಅದರಲ್ಲೂ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಒಂದು ರೂಪಾಯಿ ಅಭಿವೃದ್ಧಿ ನಡೆಸಿಲ್ಲವೆಂದು ದೂರಿದರು.

ಮಂಗಳವಾರ ರಾತ್ರಿ ಚಿಕ್ಕಬಳ್ಳಾಪುರದಲ್ಲಿ ಬೃಹತ್ ರ್ಯಾಲಿ ಮಾಡುವ ಮೂಲಕ ಮತ ಪ್ರಚಾರದಲ್ಲಿ ತೊಡಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಯೋಜನೆ ಬಿಟ್ಟು ಯಾವ ಒಂದು ಅಭಿವೃದ್ಧಿ ಕಾರ್ಯಗಳಾಗಿಲ್ಲ. ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಜನರಿಗೆ ಕಾಲಿ ಚಿಪ್ಪು ಸಿಗುತ್ತದೆ ಎಂದು ಅಕ್ರೋಶ ಹೊರಹಾಕಿದ್ದಾರೆ

ಈ ಗ್ಯಾರಂಟಿ ಯೋಜನೆಗಳಿಗಾಗಿ ಕೋಟ್ಯಂತರ ರುಪಾಯಿ ಹಣ ಮೀಸಲಿಟ್ಟು, ಖಜಾನೆ ಖಾಲಿ ಮಾಡಿ ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯಾವುದೇ ವಿಧಾನಸಭಾ ಕ್ಷೇತ್ರಗಳಲ್ಲೂ ಒಂದು ರೂಪಾಯಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ದೂರಿದರು.

ಸುಸ್ಥಿರ ಆಡಳಿತ ನೀಡದೆ ದುರಾಡಳಿತ ಮಾಡುತ್ತಿರುವ ಕಾಂಗ್ರೆಸ್‌ಗೆ ಈ ಲೋಕಸಭೆ ಚುನಾವಣೆಯಲ್ಲಿ ಮತದಾರರು ಚಿಪ್ಪು ನೀಡಬೇಕು. ಈ ಮೂಲಕವೇ ಕಾಂಗ್ರೆಸ್‌ ನಾಯಕರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಸುಧಾಕರ್‌ ಹೇಳಿದ್ದಾರೆ.

 

Related