ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ: ತೇಜಸ್ವಿ ಸೂರ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ: ತೇಜಸ್ವಿ ಸೂರ್ಯ

ಬೆಂಗಳೂರು: ಲೋಕಸಭಾ ಚುನಾವಣೆಗೆ ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಹೈ ವೋಲ್ಟೇಜ್ ಕ್ಷೇತ್ರವಾಗಿ ನಿರ್ಮಾಣವಾಗಿರುವಂತಹ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯ ರೆಡ್ಡಿ ಕಣದಲ್ಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ತ್ಯಜಿಸಿ ಸೂರ್ಯ ಅವರು ಸ್ಪರ್ಧಿಸಿದ್ದಾರೆ.

ಇಂದು ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ತಮ್ಮ ಕುಟುಂಬ ಸಮೇತ ತೆರಳಿ ಮತ ಚಲಾಯಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,”ಕರ್ನಾಟಕದಲ್ಲಿ ಇಂದು ಸಂಭ್ರಮದ ದಿನ, ಪ್ರಜಾಪ್ರಭುತ್ವದ ಹಬ್ಬ, ಲಕ್ಷಾಂತರ ಜನರು ಮತ ಚಲಾಯಿಸುತ್ತಾರೆ. ಇದು ಕೇವಲ ಹಕ್ಕು ಮಾತ್ರವಲ್ಲ, ಕರ್ತವ್ಯ. ಪ್ರತಿ ವರ್ಷದಂತೆ, ಹೆಚ್ಚಿನ ಹಿರಿಯ ನಾಗರಿಕರು ಬೂತ್‌ಗಳಲ್ಲಿ ಕಂಡುಬರುತ್ತಿದ್ದಾರೆ. ಯುವಕರು ಹಿರಿಯ ನಾಗರಿಕರಿಂದ ಸ್ಫೂರ್ತಿ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಲಿ ಎಂದು ನಾನು ಬಯಸುತ್ತೇನೆ.

ಕಾಂಗ್ರೆಸ್ ಪಕ್ಷವು 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸಮೀಕ್ಷೆಗಳು ಕಾಂಗ್ರೆಸ್ ಅನ್ನು ಹತಾಶೆಗೆ ನೂಕಿವೆ. ಬಹುಶಃ ಇದು ಮುಂದಿನ ಎರಡು ದಶಕಗಳವರೆಗೆ ಅಧಿಕಾರದ ಸಮೀಪಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಒಪ್ಪಿಕೊಂಡಿದೆ” ಎಂದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ. ಕಾಂಗ್ರೆಸ್ ಪಕ್ಷವು ಎಷ್ಟೇ ಹರಸಾಹಸ ಪಟ್ಟರು ಕೂಡ ಈ ಬಾರಿ ಮತ್ತೊಮ್ಮೆ ನರೇಂದ್ರ ಮೋದಿಗೆ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸುವುದು ಎಂದು ಹೇಳಿದ್ದಾರೆ.

 

Related