ಕಾಂಗ್ರೆಸ್ ಪಕ್ಷ ಸೇರಲು ಯಾರೇ ಬಂದರೂ ಅವರಿಗೆ ಸ್ವಾಗತ: ಸಿಎಂ

ಕಾಂಗ್ರೆಸ್ ಪಕ್ಷ ಸೇರಲು ಯಾರೇ ಬಂದರೂ ಅವರಿಗೆ ಸ್ವಾಗತ: ಸಿಎಂ

ಮೈಸೂರು: ರಾಜ್ಯ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಪರೇಷನ್ ಹಸ್ತದ ಕಾವೋ ದಿನ ದಿನಕ್ಕೆ ಬಿಸಿ ಏರುತ್ತಿದ್ದು, ಇದರ ಬಗ್ಗೆ ಇಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್​ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ. ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ‌. ಆದರೆ ಪಕ್ಷದ ಸಿದ್ಧಾಂತ, ತತ್ವ ಒಪ್ಪಿ ಬರುವವರಿಗೆ ಮಾತ್ರ ಸ್ವಾಗತ. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ವಾಗ್ದಾಳಿ ಮಾಡಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರ ಬಂದು 100 ದಿನ‌ ಆಗಿದೆ. ಇಂದಿನಿಂದ 3 ದಿನ ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದೇನೆ. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ಆ.30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆ.30ರಂದು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದರು.

 

Related