ಕೇಂದ್ರ ಸರ್ಕಾರದ ವಿರುದ್ಧಕಾಂಗ್ರೆಸ್ ಪಕ್ಷ ಧರಣಿ

ಕೇಂದ್ರ ಸರ್ಕಾರದ ವಿರುದ್ಧಕಾಂಗ್ರೆಸ್ ಪಕ್ಷ ಧರಣಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಧರಣಿಯನ್ನು ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿಂದು ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಇಂದು (ಮಂಗಳವಾರ ಏಪ್ರಿಲ್ 23ರಂದು) ಕಾಂಗ್ರೆಸ್ ಪಕ್ಷ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯ ಮುಂದುಗಡೆ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಬರ ಪರಿಹಾರ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷ ಪ್ರತಿಭಟನೆಯನ್ನು ಕೈಗೊಂಡಿದೆ. ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಧರಣಿಗೆ ಮುಂದಾಗಿದ್ದಾರೆ. ಬರ ಪರಿಹಾರದ ಅಸ್ತ್ರದ ಮೂಲಕ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಡಲು ಕಾಂಗ್ರೆಸ್ ಸರ್ಕಾರ ಸಜ್ಜಾಗಿದೆ. ನಮ್ಮ ಪಾಲು ನಮ್ಮ ಹಕ್ಕು ಎಂದು ಕೂಗುತ್ತಾ ಕೇಂದ್ರ ಬಿಜೆಪಿ ವಿರುದ್ಧ ಧಿಕಾರಕ್ಕೆ ಕೂಗುತ್ತಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕ್ಕಿದ್ದಾರೆ. ಬರ ಪರಿಹಾರದಿಂದ ಬಳಲುತ್ತಿರುವ ಕರ್ನಾಟಕ ರಾಜ್ಯದ ಜನತೆಗೆ ಮೋದಿ ಸರ್ಕಾರ ಜನರ ಜೀವನಕ್ಕೆ ಬೆಳೆಯುತ್ತಿದ್ದಾರೆ ಎಂದು ಮೋದಿ ಸರ್ಕಾರದ ವಿರುದ್ಧ ಧಿಕಾರಕ್ಕೆಕೂಗುತ್ತಿದ್ದಾರೆ.

ರೈತ್ರ ವಿರೋಧಿ ನರೇಂದ್ರ ಮೋದಿ ಅವರಿಗೆ ಧಿಕ್ಕಾರ, ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಎಲ್ಲಾ ಶಾಸಕರು ಮತ್ತು ಸಚಿವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

Related