ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಬಿಬಿಎಂಪಿ ಆಸ್ತಿ ತೆರಿಗೆ ವಲಯ ವರ್ಗೀಕರಣಕ್ಕೆ ಸಂಬಧಿಂಸಿದತೆ ಸ್ವತ್ತಿನ ಮಾಲೀಕರುಗಳಿಗೆ ವಿನಾಕಾರಣ ನೋಟಿಸ್ ನೀಡಿ, ದಂಡ ವಿಧಿಸಿರುವ ಬಗ್ಗೆ ಹಾಗು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಳ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಿಬಿಎಂಪಿ ಕಛೇರಿ ಮುಂದೆ ಗುರುವಾರ ಪ್ರತಿಭಟನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗರೆಡ್ಡಿ, ಎಂ.ಎಲ್.ಸಿ ಗಳಾದ ನಾರಾಯಣಸ್ವಾಮಿ, ಬಿ.ಕೆ ಹರಿಪ್ರಸಾದ್, ಮಾಜಿ ಸಚಿವರುಗಳು, ಶಾಸಕರುಗಳು, ಮಾಜಿ ಶಾಸಕರುಗಳು, ಮಾಜಿ ಬಿಬಿಎಂಪಿ ಸದಸ್ಯರುಗಳು, ಬ್ಲಾಕ್ ಅಧ್ಯಕ್ಷರುಗಳು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Related