ರಾಜ್ಯ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜ್ಯ ಸರ್ಕಾರ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು : ನಗರದ ತಾಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು, ಕಾರಿಗೆ ಹಗ್ಗಕಟ್ಟಿ ಎಳೆದು, ಬೈಕ್ ತಳ್ಳಿಕೊಂಡು ಆಜಾದ್ ಪಾರ್ಕ್ ವೃತ್ತ ತಲುಪಿದರು. ಅಲ್ಲಿ ಕಟ್ಟಿಗೆ ಬಳಸಿ ಚಹ ತಯಾರಿಸಿ ಎಲ್ಲರಿಗೂ ಹಂಚುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಮಾತನಾಡಿ, ಬಿಜೆಪಿ ಜನರ ಭಾವನೆಗಳನ್ನು ಕೆರಳಿಸುವ ಮೂಲಕ ರಾಜಕಾರಣ ಮಾಡುತ್ತಿದೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಬದುಕು ಕಳೆದುಕೊಳ್ಳುತ್ತಿದ್ದಾರೆ.

ಕಾರ್ಮಿಕರ ಬದುಕು ಸಂಕಷ್ಟದಲ್ಲಿದೆ. ಯುವ ಜನತೆಯ ಉತ್ಸಾಹ ಕುಗ್ಗುತ್ತಿದೆ. ಜನರ ಸಮಸ್ಯೆಗೆ ಕಾಂಗ್ರೆಸ್ ಧ್ವನಿಯಾಗುವ ಮೂಲಕ ಜನಪರ ಹೋರಾಟಕ್ಕೆ ಮುಂದಾಗಲಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರುಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಗೆ ಯಾವುದೇಕೊಡುಗೆ ನೀಡಿಲ್ಲ, ಅತಿವೃಷ್ಟಿ, ಅಕಾಲಿಕ ಮಳೆಯಿಂದ ರೈತರು ಮತ್ತು ಬೆಳೆಗಾರರು ಬೆಳೆ ಕಳೆದುಕೊಂಡಿದ್ದಾರೆ. ಅದಕ್ಕೆ ಪರಿಹಾರ ನೀಡಲುಸರ್ಕಾರ ಮುಂದಾಗದಿರುವುದನ್ನು ಜನರು ಗಮನಿಸಬೇಕೆಂದು ತಿಳಿಸಿದರು.

ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. 14ಕೋಟಿ ಜನರು ಕೆಲಸ ಕಳೆದುಕೊಂಡಿದ್ದಾರೆ. ಸಣ್ಣಮತ್ತು ಗುಡಿ ಕೈಗಾರಿಕೆಗಳು ಬಾಗಿಲು ಮುಚ್ಚಿವೆ.ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಡಬೇಕಿದೆ ಎಂದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯಮಂಜುನಾಥ್, ಕ್ಷೇತ್ರ ಸಮಿತಿ ಅಧ್ಯಕ್ಷಹಂಪಾಪುರ ಮಂಜೇಗೌಡ, ಮುಖಂಡರಾದ ರೂಬೆನ್ ಮೊಸೆಸ್, ಪವನ್, ಹಿರೇಮಗಳೂರು ರಾಮಚಂದ್ರ, ಪ್ರಕಾಶ್, ಆದಿಲ್, ಜೇಮ್ಸ್,ಆನಂದ್, ಸಿಲ್ವೆಸ್ಟರ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಚೇತನ, ಯಶೋಧಮ್ಮ,ಸುರೇಖಾ ಸಂಪತ್‌ರಾಜ್, ಗುಣವತಿ ಇತರರು ಉಪಸ್ಥಿತರಿದ್ದರು.

Related