Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಹಿ ವಿತರಿಸಿದ ಕಾಂಗ್ರೆಸ್‌ ಕಾರ್ಯಕರ್ತರು
  • Bangalore
  • Front news
  • Politics
  • State

ಸಿಹಿ ವಿತರಿಸಿದ ಕಾಂಗ್ರೆಸ್‌ ಕಾರ್ಯಕರ್ತರು

admin July 23, 2025
Spread the love

ಬೆಂಗಳೂರು: ಮೂಡ ಪ್ರಕರಣದಲ್ಲಿ ಇ.ಡಿ ಇಲಾಖೆಯು ಅನಾವಶ್ಯಕವಾಗಿ ಪ್ರವೇಶ ಮಾಡಿ ರಾಜಕಾರಣ ಮಾಡುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸಿ ಹಾಗೂ ಇ ಡಿ ಇಲಾಖೆಯ ಅರ್ಜಿಯನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಹಾಗೂ ಅವರ ಧರ್ಮಪತ್ನಿ ರವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಸಿದ್ದರಾಮಯ್ಯ ನವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಾರ್ವಜನಿಕರಿಗೆ ಸಿಹಿ ವಿತರಿಸಿರುವ ಬಗ್ಗೆ.

ಕರ್ನಾಟಕ ರಾಜ್ಯದಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಆಡಳಿತ ನಡೆಸಿ ಇಡೀ ದೇಶದಲ್ಲಿ ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿ ಎಂದು ಹೆಸರು ಗಳಿಸಿರುವ ಶ್ರೀ ಸಿದ್ದರಾಮಯ್ಯನವರಿಗೆ ಹಾಗೂ ಅವರ ಕುಟುಂಬಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಿದ ಬಿಜೆಪಿ, ಜೆಡಿಎಸ್, ನಾಯಕರ ಕುತಂತ್ರ ಹಾಗೂ ಅಪಪ್ರಚಾರಕ್ಕೆ ಇಂದು ಸರ್ವೋಚ್ಚ ನ್ಯಾಯಾಲಯ ಸೂಕ್ತ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಹೆಚ್ಚಿನ ಶಕ್ತಿಯನ್ನು ಕರುಣಿಸಲಿ ಹಾಗೂ ಅವರ ಧರ್ಮಪತ್ನಿಯವರಿಗೆ ಭಗವಂತ ಹೆಚ್ಚಿನ ಶಕ್ತಿ ಹಾಗೂ ನೆಮ್ಮದಿಯನ್ನು ಕರುಣಿಸಲಿ ಎಂದು ಅವರ ಹೆಸರಿನಲ್ಲಿ ವಿಶೇಷ ಪೂಜೆಯನ್ನು ಮಾಡಲಾಯಿತು,

ಇದುವರೆಗೂ ಯಾವುದೇ ರಾಜಕೀಯಕ್ಕೆ ಹಾಗೂ ಸಭೆ ಸಮಾರಂಭಗಳಲ್ಲಿ ಬಹಿರಂಗವಾಗಿ ಭಾಗವಹಿಸದೆ ಅದರಿಂದ ದೂರ ಇರುವ ಮುಗ್ಧ ಗೃಹಿಣಿ ಶ್ರೀಮತಿ ಪಾರ್ವತಿ ಸಿದ್ದರಾಮಯ್ಯ ನವರ ಹೆಸರಿನಲ್ಲಿ ರಾಜಕೀಯ ಮಾಡಿ ಅವರಿಗೆ ಕಳಂಕ ತರಲು ಯತ್ನಿಸಿದ ಕೆಲವು ರಾಜಕೀಯ ದುಷ್ಟರು,ಸುಳ್ಳು ಆರೋಪ ಮಾಡಿ ಅವರಿಗೆ ಕಳಂಕ ತರಲು ಯತ್ನಿಸಿದರು.

ಇಂತಹ ದುಷ್ಟರಿಗೆ ಇಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು ಆಘಾತವನ್ನು ತಂದಿರಬೇಕು,
ಇಡೀ ರಾಜ್ಯವೆ ಅಭಿವೃದ್ಧಿಯತ್ತ ಸಾಗುತ್ತಿದೆ ಕಾಂಗ್ರೆಸ್ ಪಕ್ಷ ’ನುಡಿದಂತೆ ನಡೆಯುತ್ತಿದೆ’ ಈಗಾಗಲೇ ಇ.ಡಿ. ಪ್ರಕರಣದಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರನ್ನು ಷಡ್ಯಂತರದಲ್ಲಿ ಸಿಲುಕಿಸಲು ಯತ್ನಿಸಿ ವಿಫಲವಾಗಿರುವ ಕೇಂದ್ರ ಸರ್ಕಾರ ಈಗ ಮತ್ತೆ ಇ.ಡಿ ಮೂಲಕ ಇಡೀ ದೇಶದಲ್ಲಿ ವಿರೋಧ ಪಕ್ಷವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂಬುವುದರ ವಿರುದ್ಧ ಸೂಕ್ತ ತೀರ್ಪು ಸರ್ವೋಚ್ಚ ನ್ಯಾಯಾಲಯ ನೀಡಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಇ.ಡಿ ಮೂಲಕ ರಾಜಕೀಯ ಲಾಭಗಳಿಸಲು ಯತ್ನಿಸಿದ ಬಿಜೆಪಿಯ ನಾಯಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು.

ಅತ್ಯಂತ ಪ್ರಾಮಾಣಿಕತೆಯಿಂದ ರಾಜ್ಯದಲ್ಲಿ ಜನರ ಸೇವೆ ಮಾಡುತ್ತಿರುವ ಶ್ರೀ ಸಿದ್ದರಾಮಯ್ಯನವರಿಗೆ ಈ ತೀರ್ಪು ಹೆಚ್ಚಿನ ಶಕ್ತಿಯನ್ನು ತಂದಿದ್ದು ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ರಾಜ್ಯದ ಜನತೆಯ ಒಳಿತಿಗಾಗಿ ಶ್ರಮಿಸಲಿ ಎಂದು ವಿಶೇಷ ಪೂಜೆಯನ್ನು ’ಅರಮನೆ ರಸ್ತೆಯ ಬಳಿ ಇರುವ
’ಶ್ರೀ ಭಗವಾನ್ ಮಾರುತಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಎ ಆನಂದ್ ಪ್ರಕಾಶ್,ಚಂದ್ರಶೇಖರ್, ಆನಂದ್ ಕುಮಾರ್,ಕುಶಲ್ ಅರುವೆಗೌಡ,ನವೀನ್ ಪುಟ್ಟರಾಜು, ನವೀನ್ ಸುಂಕದಕಟ್ಟೆ,ಚಿನ್ನಿ ಪ್ರಕಾಶ್, ಹೋಬಳೇಶ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌
Next: ಇಂದು ದೆಹಲಿಗೆ  ತೆರಳಲ್ಲಿರುವ ಸಿಎಂ, ಡಿಸಿಎಂ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.