Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚುನಾವಣೆಗಳಲ್ಲಿ ಅಕ್ರಮ, ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು: ಬಿವೈವಿ
  • Bangalore
  • Politics
  • State

ಚುನಾವಣೆಗಳಲ್ಲಿ ಅಕ್ರಮ, ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು: ಬಿವೈವಿ

admin September 5, 2025 1 minute read
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಮುಂದಿನ ಸ್ಥಳೀಯ ಚುನಾವಣೆಗೆ ಪತ್ರ ಮತ ಬಳಕೆಗೆ ಕಾಂಗ್ರೆಸ್ ಸರಕಾರ ನಿರ್ಧರಿಸಿರುವುದನ್ನು ಖಂಡಿಸಿ ಬಿವೈ ವಿಜಯೇಂದ್ರ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಆಕ್ರೋಶ ಹರ ಹಾಕಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) ಯಂತ್ರ ಬದಿಗಿಟ್ಟು ಮತ ಪತ್ರ (ಬ್ಯಾಲಟ್ ಪೇಪರ್) ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್‌ ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣಿಕರಿಸಿಕೊಂಡಂತಿದೆ.

ಈ ಹಿನ್ನೆಲೆಯಲ್ಲಿ EVM ಮತಯಂತ್ರ ಬಳಸಿ ರಾಜ್ಯದಲ್ಲಿ 2೦23ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ

ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ, ಅದೂ ಕಾಂಗ್ರೆಸ್ಸಿಗರ ಮೇಲೇ ಹೆಚ್ಚು ಎಂಬುದನ್ನು ಕಾಂಗ್ರೆಸ್ಸಿಗರು ಇತಿಹಾಸದ ಪುಟಗಳನ್ನು ತೆರೆದು ನೋಡಲಿ. ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣವಾಗಿದ್ದು ಅವರು ನಡೆಸಿದ ಮತಗಳ್ಳತನ ಹಾಗೂ ಅಕ್ರಮ ಚುನಾವಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪಿನಿಂದ ಎಂಬ ಇತಿಹಾಸವನ್ನು ದೇಶದ ಜನ ಮರೆತಿಲ್ಲ.

ಮತ ಪತ್ರ ಆಧರಿಸಿದ ಚುನಾವಣೆಗಳಲ್ಲಿ ಅಕ್ರಮ ಹಾಗೂ ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು ಚುನಾವಣೆಗಳ ನಿರಂತರ ಸೋಲುಗಳಿಂದ ಮೂಲೆಗುಂಪಾಗುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿದ್ದಾರೆ. ಈ ಕಾರಣದಿಂದಾಗಿ ಆಧಾರ ರಹಿತ, ಅಪ್ರಬುದ್ಧ, ವಿತಂಡ ವಾದವನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು ಮತಗಳ್ಳತನದ ಹೆಸರಿನಲ್ಲಿ ಬಾಲಿಶ ವಿವಾದ ಹುಟ್ಟು ಹಾಕಲು ಹೊರಟಿದ್ದಾರೆ, ಇದನ್ನು ಬೆಂಬಲಿಸಲು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರವನ್ನು ಬಳಸಿ ಚುನಾವಣೆ ನಡೆಸುವುದಾಗಿ ನಿರ್ಣಯ ಕೈಗೊಂಡಿದೆ. ಇಡೀ ದೇಶ, ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಂತ್ರಜ್ಞಾನವನ್ನು ಅಪಮಾನಿಸಿ ಹೆಬ್ಬೆಟ್ಟಿನ ದಿನಗಳನ್ನು ನೆನಪಿಸಲು ಹೊರಟಿದೆ. ಇದನ್ನೂ ಓದಿ: ಸತತ 6ನೇ ಬಾರಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಕೆ.ಎನ್. ರಾಜಣ್ಣ ಆಯ್ಕೆ

ಮತಪತ್ರಗಳ ಬಳಕೆಯಿಂದ ಚುನಾವಣಾ ಅಕ್ರಮ ಎಸೆಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಬೆಂಬಲಿಸುತ್ತಿದೆ, ಅದನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಮೊದಲ ಹೆಜ್ಜೆ ಇಡಲು ಹೊರಟಿದೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪಾರದರ್ಶಕ ಚುನಾವಣೆಯನ್ನು ಧಿಕ್ಕರಿಸುವುದೇ ಕಾಂಗ್ರೆಸ್‌ನ ಅಜೆಂಡಾ ಹಾಗೂ ಗುರಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಸತತ 6ನೇ ಬಾರಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಕೆ.ಎನ್. ರಾಜಣ್ಣ ಆಯ್ಕೆ
Next: ಡೈರೆಕ್ಟಾಗಿ ಮೋದಿಗೆ ಟಾಂಗ್ ಕೊಟ್ರಾ ಡಿಕೆಶಿ..?

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.