ಸಂವಿಧಾನ ದಿನಾಚರಣೆ: ಸಂವಿಧಾನ “ಪ್ರಸ್ತಾವನೆ”ಯ ಭಾಗ ಭೋದಿಸಿದ ಸಿಎಂ

ಸಂವಿಧಾನ ದಿನಾಚರಣೆ: ಸಂವಿಧಾನ “ಪ್ರಸ್ತಾವನೆ”ಯ ಭಾಗ ಭೋದಿಸಿದ ಸಿಎಂ

ಬೆಂಗಳೂರು: ಸಂವಿಧಾನ ದಿನಾಚರಣೆಯ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಕಾರ್ಯಕ್ರಮದ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಾರತದ ಸಂವಿಧಾನ “ಪ್ರಸ್ತಾವನೆ”ಯ ಭಾಗವನ್ನು ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Related