Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಂವಿಧಾನ ನಮ್ಮೆಲ್ಲರ ಪಾಲಿನ ಪವಿತ್ರ ಗ್ರಂಥ: ಡಿಸಿಎಂ
  • Politics
  • State

ಸಂವಿಧಾನ ನಮ್ಮೆಲ್ಲರ ಪಾಲಿನ ಪವಿತ್ರ ಗ್ರಂಥ: ಡಿಸಿಎಂ

admin January 18, 2025 1 minute read
Spread the love

ಧಾರವಾಡ: ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಧಾರವಾಡದಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದ ಅವರು, ನಮ್ಮ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ್ ಸಮಾವೇಶ ಇಡೀ ದೇಶಕ್ಕೆ ದೊಡ್ಡ ಸಂದೇಶ ರವಾನಿಸುವ ಸಮಾವೇಶವಾಗಿದೆ. ಬೆಳಗಾವಿ ಮೂಲಕ ದೇಶಕ್ಕೆ ಹೊಸ ಸಂದೇಶ ರವಾನಿಸಲಾಗುವುದು. ಗಾಂಧಿ ಅವರ ಇತಿಹಾಸ ಕಾಂಗ್ರೆಸ್ ಇತಿಹಾಸ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. ಗಾಂಧಿಜಿ ಅವರ ಕಾರ್ಯಕ್ರಮವನ್ನು ನಾವು ದೇಶಕ್ಕಾಗಿ ಮಾಡುತ್ತಿದ್ದೇವೆ. ದೇಶಕ್ಕೆ ಅವರು ಕೊಟ್ಟ ಬುನಾದಿ ಮೇಲೆ ಚರ್ಚೆ ನಡೆಯುತ್ತಿದೆ” ಎಂದು ತಿಳಿಸಿದರು. ಇದನ್ನೂ ಓದಿ: ʼಬಿಜಿಎಸ್‌ʼ ಅನ್ನದಾಸೋಹ, ವಿದ್ಯೆ ಕಲ್ಪಿಸುತ್ತಿರುವ ಮಹತ್ತರ ಕೆಲಸ: ಮುನಿಯಪ್ಪ

ಸಂವಿಧಾನ ನಮ್ಮೆಲ್ಲರ ಪಾಲಿನ ಪವಿತ್ರ ಗ್ರಂಥ

ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ನೂರು ವರ್ಷ ಪೂರ್ಣಗೊಂಡಿದೆ. ಅಖಂಡ ಕರ್ನಾಟಕಕ್ಕೆ ವೇದಿಕೆ ಸಜ್ಜು ಮಾಡಿದ್ದು1924ರಲ್ಲೇ. ಗಂಗಾಧರ ದೇಶಪಾಂಡೆ ಅವರು ಇದಕ್ಕೆ ಶ್ರಮವಹಿಸಿದ್ದರು. ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ದೇಶಕ್ಕೆ ಸ್ವಾಂತ್ರ್ಯ ಬಂದಿದೆ, ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಸಿಕ್ಕಿದೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಸಿಕ್ಕಿದೆ. ಸಂವಿಧಾನವನ್ನು ಪಡೆದಿದ್ದೇವೆ. ಈ ಸಂವಿಧಾನ ಹಾಗೂಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಶಾಸಕರು, ಮಂತ್ರಿಗಳು, ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದೇವೆ. ಸಂವಿಧಾನ ನಮ್ಮ ಪಾಲಿನ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಆಗಿದೆ. ಇದನ್ನು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು” ಎಂದು ತಿಳಿಸಿದರು.

ಸಂವಿಧಾನ ರಕ್ಷಣೆ ಮಾಡಬೇಕು ಎಂಬ ಉದ್ದೇಶದಿಂದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೇಶಕ್ಕೆ ದೊಡ್ಡ ಸಂದೇಶ ರವಾನಿಸಲು ಎಐಸಿಸಿ ಈ ಕಾರ್ಯಕ್ರಮ ರೂಪಿಸಿದೆ. ನಮ್ಮ ಹೆಚ್.ಕೆ. ಪಾಟೀಲ್ ಅವರಿಗೆ ನಮ್ಮ ಪಕ್ಷ ಗಾಂಧಿ ಭಾರತ ಕಾರ್ಯಕ್ರಮದ ಜವಾಬ್ದಾರಿ ವಹಿಸಿದ್ದೇವೆ. ಅವರು ಸರ್ಕಾರ ಹಾಗೂ ಪಕ್ಷ ಯಾವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಮಾರ್ಗದರ್ಶನ ನೀಡಿದ್ದಾರೆ. ಈ ಬಗ್ಗೆ ದೆಹಲಿ ನಾಯಕರ ಜತೆ ಚರ್ಚೆ ಮಾಡಿ ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಸಮಾವೇಶದ ಹೆಸರು ನಿಗದಿ ಮಾಡಲು ಎಐಸಿಸಿ ನಾಯಕರು ಹೆಚ್.ಕೆ ಪಾಟೀಲ್ ಅವರ ಸಲಹೆಯನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆ ಎಲ್ಲಾ ನಾಯಕರು ಬಹಳ ಉತ್ಸಾಹದಿಂದ ಹಳ್ಳಿ ಹಳ್ಳಿಗೆ ಈ ಸಂದೇಶ ರವಾನಿಸುತ್ತಿದ್ದಾರೆ. ಅವರಿಗೆ ನಾನು ಅಭಿನಂದಿಸುತ್ತಿದ್ದೇನೆ. ಇದರ ಜತೆಗೆ ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಫೆಬ್ರವರಿ ಎರಡನೇ ವಾರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ತಯಾರಿ ನಡೆಯುತ್ತಿದೆ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ʼಬಿಜಿಎಸ್‌ʼ ಅನ್ನದಾಸೋಹ, ವಿದ್ಯೆ ಕಲ್ಪಿಸುತ್ತಿರುವ ಮಹತ್ತರ ಕೆಲಸ: ಮುನಿಯಪ್ಪ
Next: ಜಿಲ್ಲೆಯ ಕೀರ್ತಿ ಹೆಚ್ಚಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚು

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.