ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹಿಳಾ ಮತದಾರರಿಗೆ 140 ಪಿಂಕ್​ ಬೂತ್​

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹಿಳಾ ಮತದಾರರಿಗೆ 140 ಪಿಂಕ್​ ಬೂತ್​

ಬೆಂಗಳೂರು: ಕರ್ನಾಟಕ ರಾಜ್ಯದ2023 ನೆಯ ಸಾಲಿನ ವಿಧಾನಸಭಾ ಚುನಾವಣೆಯ ಮತದಾನ ದಿನಾಂಕ ಹತ್ತಿರವಾಗಿದ್ದು, ಏನೇನೋ ಕೆಲವೇ ಗಂಟೆಗಳಲ್ಲಿ ಮತದಾನ ಪ್ರಾರಂಭವಾಗುವುದು. ಮತದಾನಕ್ಕೆ ಯಾವೆಲ್ಲ ರೀತಿಯ ತಯಾರಿಯ ಯಾಗಬೇಕು ಎಲ್ಲಾ ತರದ ತಯಾರಿಯನ್ನು ಚುನಾವಣೆ ಅಧಿಕಾರಿಗಳು ಮಾಡುತ್ತಿದ್ದಾರೆ.

ಇನ್ನು ರಾಜ್ಯದ ರಾಜಧಾನಿಯಲ್ಲಿ ಮಹಿಳೆಯರಿಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಭೂತಗಳನ್ನು ನಿರ್ಮಾಣ ಮಾಡಿದ್ದಾರೆ

ಹೌದು, 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು, ರಾಜ್ಯಾದ್ಯಂತ ಮತದಾನಕ್ಕೆ ಬೂತ್​ಗಳನ್ನ ಸಜ್ಜುಗೊಳಿಸಲಾಗ್ತಿದೆ. ಬೆಂಗಳೂರು, ಕೋಲಾರ, ಮೈಸೂರು, ಹಾಸನ ಬೆಳಗಾವಿ, ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ. ಗಡಿಗಳಲ್ಲಿ ಚುನಾವಣಾ ಅಕ್ರಮ ತಡೆಯಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಚೆಕ್ ಪೋಸ್ಟ್​ಗಳಲ್ಲಿ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿದ್ದಾರೆ.

ಬೆಂಗಳೂರಲ್ಲಿ ಮಹಿಳಾ ಮತದಾರರ ಸೆಳೆಯಲು ಪಿಂಕ್ ​ಬೂತ್ ರೆಡಿ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 140 ಪಿಂಕ್​ ಬೂತ್​ ನಿರ್ಮಾಣ ಮಾಡಲಾಗಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಪಿಂಕ್ ಬೂತ್​​ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

 

Related