ಕೊರೋನಾ: 3ನೇ ಸ್ಥಾನಕ್ಕೇರಿದ ಭಾರತ

ಕೊರೋನಾ: 3ನೇ ಸ್ಥಾನಕ್ಕೇರಿದ ಭಾರತ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ವಿಶ್ವದ ಸೋಂಕಿತರ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೇರಿದೆ.

ಭಾನುವಾರ ಒಂದೇ ದಿನ ಭಾರತದಲ್ಲಿ 24,912 ಪ್ರಕರಣಗಳು ಪತ್ತೆಯಾಗಿದ್ದು, ಜುಲೈ ತಿಂಗಳ ಮೊದಲ ಐದು ದಿನಗಳಲ್ಲೇ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ. ಜೂನ್ ತಿಂಗಳಲ್ಲಿ ೪ ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿತ್ತು.

ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾ ಮೊದಲನೇ ಸ್ಥಾನ, 2ನೇ ಸ್ಥಾನದಲ್ಲಿ ಬ್ರೆಜಿಲ್, ಮೂರನೇ ಸ್ಥಾನದಲ್ಲಿದ್ದ ರಷ್ಯಾ ನಾಲ್ಕನೇ ಸ್ಥಾನದಲ್ಲಿದೆ.

Related