ಸಚಿವೆಗೆ ಕೊರೋನಾ ಸೋಂಕು

ಸಚಿವೆಗೆ ಕೊರೋನಾ ಸೋಂಕು

ಬೆಳಗಾವಿ : ನಿನ್ನೆ ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಟ್ವೀಟ್ ಮಾಡಿದ್ದಾರೆ.

ನಿಪ್ಪಾಣಿ ಕ್ಷೇತ್ರದ ಶಾಸಕಿ ಮತ್ತು ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು ತಗುಲಿದೆ. “ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೈನ್ ಆಗಬೇಕಾಗಿ ವಿನಂತಿ” ಎಂದು ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ” ಎಂದು ಆರೋಗ್ಯದ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.

Related