ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ ಹೊರತಾಗಿ ಜಾತಿಗಳ ಮೇಲಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ ಹೊರತಾಗಿ ಜಾತಿಗಳ ಮೇಲಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಹುಬ್ಬಳ್ಳಿ: ಈ ದೇಶದಲ್ಲಿ ಸಾವಿರಾರು ಜಾತಿಗಳಿವೆ ಹಾಗಂತ ಹೇಳಿ ಜಾತಿ ರಾಜಕೀಯ ಮಾಡಲು ಸಂವಿಧಾನ ಒಪ್ಪೋದಿಲ್ಲ ಹಾಗಾಗಿ ಈ ದೇಶ ನಡೆಯುತ್ತಿರುವುದೇ ಸಂವಿಧಾನದ ಮೇಲೆ ಹೊರತಾಗಿ ಭಗವದ್ಗೀತೆ, ಕುರಾನ್, ಬೈಬಲ್ ಗಳ ಮೇಲೆಲ್ಲ ಎಂದು ಸಚಿವ ಪ್ರಿಯಾಂಕರ್ ಗೆ ಅವರು ಹೇಳಿದ್ದಾರೆ.

ಇಂದು (ಡಿ.27 ಬುಧವಾರ) ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಕಳೆದ ಬಿಜೆಪಿ ಸರ್ಕಾರ ಜಾತಿ ಮೇಲೆ ರಾಜಕೀಯ ಮಾಡುತ್ತಿತ್ತು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಸಂವಿಧಾನದ ತತ್ವವನ್ನು ಪಾಲಿಸಿ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರಿಗೆ ಮಾತಿನಲ್ಲಿ ಟಾಂಗ್‌ ಕೊಟ್ಟಿದ್ದಾರೆ.

ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಇವಾಗ ಸಂವಿಧಾನದ ಸರ್ಕಾರ ಇದೆ. ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರು ಏನೆ ಅಂದ್ರು ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರವೇ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸರ್ಕಾರಗಳು ನಡೆಯೋದು ಸಂವಿಧಾನ ಮೇಲೆ. ಬಸವ ತತ್ವ, ಅಂಬೇಡ್ಕರ್ ತತ್ವ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು ಎಂದು ಹೇಳಿದ್ದಾರೆ.

ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್‌ಎಸ್‌ಎಸ್‌ನವರು ಎಂದಿದ್ರು. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ. ಯತ್ನಾಳ್‌ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು. ವಿಜಯೇಂದ್ರ, ಯತೀಂದ್ರ ಮೇಲೆ ಶ್ಯಾಡೋ ಸಿಎಂ ಅಂತಾ ಆರೋಪ ಮಾಡಿದ್ರು. ಕಳೆದ ಸರ್ಕಾರದಲ್ಲಿ ಶ್ಯಾಡೋ ಸಿಎಂ ಯಾರಿದ್ರು? ಅಂತ ಖರ್ಗೆ ಪ್ರಶ್ನಿಸಿದ್ದಾರೆ.

 

Related