ಕೋವಿಡ್-19: ತಂಬಾಕು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಕೋವಿಡ್-19: ತಂಬಾಕು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಕಾರವಾರ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊಗೆ ರಹಿತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಜಿಲ್ಲೆಯಲ್ಲಿ ನಿಷೇಧಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ ಆದೇಶ ಹೊರಡಿಸಿದ್ದಾರೆ.

ಪಾನ್ ಮಸಾಲ ಮತ್ತು ಅಡಿಕೆಯಿಂದ ತಯಾರಾದ ಉತ್ಪನ್ನಗಳಿಂದ ಹೆಚ್ಚು ಜೊಲ್ಲುರಸ ಉತ್ಪಾದನೆಯಾಗುವುದರಿಂದ ಕೋವಿಡ್-19 ಸೋಂಕು ಹರಡುವ ಸಾಧ್ಯತೆ ಹೆಚ್ಚು. ಆದ್ದರಿಂದ ಹೊಗೆ ರಹಿತ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು, ಬಳಕೆ ಮಾಡುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ.

ಅಲ್ಲದೇ ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ – 1887, ವಿಪತ್ತು ನಿರ್ವಹಣಾ ಕಾಯ್ದೆ-2005, ಭಾರತೀಯ ದಂಡ ಸಂಹಿತೆ-1860 ಮತ್ತು ದಂಡ ಪ್ರಕ್ರಿಯಾ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Related