ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.
ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ಬಂದಿದೆ. ಹೆಚ್.ಡಿ ಕುಮಾರಸ್ವಾಮಿ ಅವರೇ ಕೊರೊನಾ ಪಾಸಿಟಿವ್ ಬಗ್ಗೆ ದೃಢಪಡಿಸಿದ್ದಾರೆ. ಸಣ್ಣ ಪ್ರಮಾಣದ ಜ್ವರ, ಮೈ, ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ (Covid 19) ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ಲಕ್ಷಣಗಳು ಕಾಣಿಸಿಕೊಂಡಿರು ವ ಕಾರಣ, ವೈದ್ಯರು ಹೋಮ್ ಐಸೋಲೇಷನ್ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಅವ್ರು ಟ್ವೀಟ್ ಮೂಲಕ ತಿಳಿಸಿದ್ದಾರೆ.