ಕೋವಿಡ್ ಲಸಿಕೆ ಕಾರ್ಯಕ್ರಮ ಆರಂಭ

ಕೋವಿಡ್ ಲಸಿಕೆ ಕಾರ್ಯಕ್ರಮ ಆರಂಭ

ವಿಜಯಪುರ : ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ನೀಡುವ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್ ‘ಡಿ’ ನೌಕರ ಲಕ್ಷ್ಮಣ ಕೊಳೂರಗಿ(57) ಅವರು ಕೋವಿಡ್-19 ಪ್ರಥಮ ಲಸಿಕೆ ಪಡೆದುಕೊಂಡರು. ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಶ್ರೀಶೈಲ ಶಿವಪ್ಪ ಚಟ್ಟರ(59) ಎರಡನೇ ಡೋಸ್, ಜಿಲ್ಲಾ ಆಸ್ಪತ್ರೆಯ ಗ್ರೂಪ್ ‘ಡಿ’ ನೌಕರ ಬಾಬಾಜಾನ್ ತಾಜಿಂತರಕ್(33) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕಂಪ್ಯೂಟರ್ ಆಪರೇಟರ್ ಮೀನಾಕ್ಷಿ ಸಲಗರ್(38) ನಾಲ್ಕನೇ ಡೋಸ್ ಪಡೆದುಕೊಂಡರು.

ಕೋವಿಡ್ ಲಸಿಕೆ ಸರ್ಕಾರದ ನಿರ್ದೇಶನದಂತೆ ಮೊದಲ ಹಂತದಲ್ಲಿ ನಿಗದಿತ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.

ಲಸಿಕಾ ಕೇಂದ್ರದಲ್ಲಿ ಪ್ರಧಾನಮಂತ್ರಿ ಭಾಷಣದ ನೇರಪ್ರಸಾರದ ವೀಕ್ಷಣೆ ಮಾಡಲಾಯಿತು. ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕುವ ಉದ್ದೇಶಕ್ಕಾಗಿ ಪ್ರತ್ಯೇಕ ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಆಧಾರ್ ವೆರಿಫಿಕೇಶನ್ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿ ಸ್ಥಾಪಿಸಲಾಗಿದೆ.

Related