ಕೇಂದ್ರದ ಸರ್ಕಾರದ ವಿರುದ್ಧ ಸಿಪಿಐಎಂ ಪ್ರತಿಭಟನೆ

ಕೇಂದ್ರದ ಸರ್ಕಾರದ ವಿರುದ್ಧ ಸಿಪಿಐಎಂ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರವು ನಮ್ಮ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚುವ ವಿಚಾರದಲ್ಲಿ ಅನ್ಯಾಯವೆಸಗಿದೆ ಎಂದು ಇಂದು ಬೆಂಗಳೂರು ನಗರದಲ್ಲಿ ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರದಿಂದ ಒಂದು ರಾಜ್ಯಕ್ಕೆ ಎಷ್ಟು ತೆರಿಗೆ ಬರಬೇಕು ಅಷ್ಟು ತೆರಿಗೆಯನ್ನು ನಮ್ಮ ಕರ್ನಾಟಕ ಸರ್ಕಾರಕ್ಕೆ ನೀಡದೆ ಊಹಾಪೋಹ ಉತ್ತರಗಳನ್ನು ನೀಡುತ್ತಿದ್ದಾರೆ ಎಂದು ಸಿಪಿಐಎಂ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಏನ್ ಪ್ರತಾಪ್ ಸಿಂಹ ಹೇಳಿದ್ದಾರೆ.

ಇಂದು ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ. ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಪಿಐಎಂ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎನ್ ಪ್ರತಾಪ್ ಸಿಂಹ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರಗಳನ್ನು ಬೆಂಬಲಿಸಿ ಸಿಪಿಐ(ಎಂ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ಇಟಿ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಬಿ.ಎನ್ ಮಂಜುನಾಥ್, ಚಂದ್ರತೇಜಸ್ವಿ, ಎನ್ ವೆಂಕಟಾಚಲಯ್ಯ, ಟಿ ಯಶವಂತ್, ವಿಮಲಾ ಸೇರಿದಂತೆ ಹಲವರು ಇದ್ದರು.

Related