ಗರಿಗರಿ ನಕಲಿ ನೋಟು ಪತ್ತೆ

ಗರಿಗರಿ ನಕಲಿ ನೋಟು ಪತ್ತೆ

ಬೆಳಗಾವಿ(ಚಿಕ್ಕೋಡಿ), ಫೆ. 22 : 500ರೂ. ಮುಖ ಬೆಲೆಯ ನಕಲಿ ನೋಟು ಸರಬರಾಜು ಮಾಡುತ್ತಿದ್ದ 5 ಅಂತರಾಜ್ಯ ಕಳ್ಳರನ್ನು ಜಿಲ್ಲೆಯ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ ರೂ. ನಕಲಿ ಮತ್ತು 12 ಸಾವಿರ ರೂ. ಮೌಲ್ಯದ ಅಸಲಿ ನೋಟು ಸಾಗಿಸುವ ಸಂದರ್ಭದಲ್ಲಿ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಂಕೇಶ್ವರ ಠಾಣೆಯ ಪೊಲೀಸರು ಐವರು ಅಂತರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರದ ಅಮರ್ ಶಂಕರ್ ಅಂಬೇಕರ(28), ಕಾಗಲ್ ತಾಲೂಕಿನ ಬೆಲ್ಲೋಳಿಬಾಚಲಿ ಗ್ರಾಮದ ದೈರ್ಯಶೀಲ ಬಾಬುರಾವ್ ಪಾಟೀಲ್(42), ಬಾಬಾಸೋ ವಸಂತ್ ಪಾಟೀಲ್(31), ನಿಪ್ಪಾಣಿ ಪಟ್ಟಣದ ರಾಜೇಶ್ ಮಾರುತಿ ಮೋಹಿತೆ(48) ಮತ್ತು ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಅಶೋಕ್ ಶಂಕರ್
ನಂಬಿಸಿ, ಮೋಸ ಮಾಡುವ ಪ್ರಯತ್ನ ಮಾಡುತ್ತಿದ್ದ ವೇಳೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Related