ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿ ಬಗ್ಗೆ ಗುದ್ದಾಟ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೀಗ ಜೆಡಿಎಸ್ ನ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ಕರ್ನಾಟಕ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್ ಮಾಡಿ ಎನ್ನುವ ಮೂಲಕ ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಕುರಿತು ತಮ್ಮ ಸೋಶಿಯಲ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ, ಹರಿಯಾಣದ ಸೂಪರ್ ಸಿಎಂ ನಮ್ಮನ್ನು ಆಳುತ್ತಿದ್ದಾರೆ!. ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರ್ಕಾರದ ಅಧಿಕಾರಿಗಳೊಂದಿಗೆ ಸಭೆಗಳನ್ನೂ ನಡೆಸುತ್ತಿದ್ದಾರೆ!!. ಕನ್ನಡಿಗ ಹೆಮ್ಮೆಯ ಸ್ವಯಂಘೋಷಿತ ಚಾಂಪಿಯನ್ ಸಿದ್ದರಾಮಯ್ಯನವರು ರಾಜ್ಯದ ಆಡಳಿತವನ್ನು ಸದ್ದಿಲ್ಲದೆ ಹೊರಗುತ್ತಿಗೆ ನೀಡಿದ್ದಾರೆ. ನಮ್ಮ ಹೆಮ್ಮೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಅಂದರೆ ಬಿಜೆಪಿಯವರಿಗೆ ಅಕ್ರಮ: ರಾಮಲಿಂಗಾ ರೆಡ್ಡಿ
ಸ್ಕ್ಯಾನ್ ಮಾಡಿದರೆ ರಣದೀಪ್ ಸುರ್ಜೇವಾಲಾರ ಫೇಸ್ಬುಕ್ ಖಾತೆ ತೆರೆದುಕೊಳ್ಳುತ್ತದೆ. ಪರೋಕ್ಷವಾಗಿ ‘ಇದು ಸುರ್ಜೇವಾಲ ಸರ್ಕಾರ’ ಎಂದು ನಿಖಿಲ್ ತಿವಿದಿದ್ದಾರೆ.
