ತೈಲ ಬೆಲೆ ಏರಿಕೆ ಕಾಂಗ್ರೆಸ್ ನಿಂದ ಸೈಕಲ್ ಜಾಥಾ

ತೈಲ ಬೆಲೆ ಏರಿಕೆ ಕಾಂಗ್ರೆಸ್ ನಿಂದ ಸೈಕಲ್ ಜಾಥಾ

ಬೆಂಗಳೂರು : ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಸೋಮವಾರ ಬೆಳಿಗ್ಗೆ 11.00 ಗಂಟೆಗೆ ಜಿ.ಪಿ.ಒ ಮತ್ತು ಆದಾಯ ತೆರಿಗೆ ಕಟ್ಟಡದ ಮುಂಭಾಗದಲ್ಲಿ ಕೆಪಿಸಿಸಿ ವತಿಯಿಂದ ಧರಣೆ ಮಾಡಲಾಗುವುದು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ-ಅವರ ಮನೆಯಿಂದ ಬೆಳಿಗ್ಗೆ 9.30ಕ್ಕೆ ಸೈಕಲ್ ನಲ್ಲಿ ಹೊರಟು ಬೆಳಿಗ್ಗೆ 10.00 ಗಂಟೆಗೆ ಕೆಪಿಸಿಸಿ ಕಚೇರಿ ತಲುಪಿದ್ದಾರೆ. ಆದಾಯ ತೆರಿಗೆ ಕಟ್ಟಡದ ಮುಂಭಾಗ ತಲುಪಿ ಧರಣೆ ನಡೆಸಿದರು.

ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ನಡೆದ ಧರಣಿಯಲ್ಲಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ತಮ್ಮ ಮನೆಯಿಂದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಗೆ ಸೈಕಲ್ ನಲ್ಲಿ ಹೋದರು. ಪಕ್ಷದ ನಾಯಕರು ಕಾರ್ಯಕರ್ತರು ಸಾಥ್ ನೀಡಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಮೀನ್ಸ್ ಸ್ಕ್ವೆರ್ ವೃತ್ತದಲ್ಲಿರುವ ಆದಾಯ ತೆರಿಗೆ ಕಟ್ಟಡದ ಕಡೆ ಹೊರಟ ಸೈಕಲ್ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

Related