ಡಿ.ಜೆ. ಹಳ್ಳಿಗೆ ಸಿದ್ದರಾಮಯ್ಯ ಭೇಟಿ

ಡಿ.ಜೆ. ಹಳ್ಳಿಗೆ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬುಧವಾರ ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು. ಸಿದ್ದರಾಮಯ್ಯ ಅವರು ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ಪೊಲೀಸ್ ಠಾಣೆಗೆ ತೆರಳಿ ಪರಿಶೀಲಿಸಿದರು.

ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹಮದ್, ವೆಂಕಟರಮಣಪ್ಪ ಮತ್ತಿತರರು ಹಾಜರಿದ್ದರು. ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.

Related